CHIKMAGALURU | ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ
Update: 2026-02-01 15:13 IST
ಚಿಕ್ಕಮಗಳೂರು: ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತಿದ್ದ ಅಸ್ಸಾಂ ಮೂಲದ ಮಹಿಳೆ ಅಸ್ಮಿಯಾ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದವರು.
ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಅಸ್ಮಿಯಾರನ್ನು ಆಂಬುಲೆನ್ಸ್ ನಲ್ಲಿ ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆಯೇ ಆಕೆ ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ-ಮಗುವನ್ನ ಆಂಬುಲೆನ್ಸ್ ಚಾಲಕ ಆರಿಫ್ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದ್ದಾರೆ. ತಾಯಿ-ಮಗು ಇಬ್ಬರು ಕ್ಷೇಮವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.