ಭಾರೀ ಮಳೆ; ಆ.3ರಂದು ಶೃಂಗೇರಿ, ಕೊಪ್ಪ ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ
Update: 2026-08-02 23:35 IST
ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶೃಂಗೇರಿ, ಕೊಪ್ಪ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆ.3ರಂದು ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಹೋಬಳಿಯ ಶಿಶುಪಾಲನಾ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.