×
Ad

ಚಿಕ್ಕಮಗಳೂರು | ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Update: 2025-06-24 21:01 IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳೂ ಧರೆಗುರುಳಿವೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಾಫಿನಾಡಿನಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಮಲೆನಾಡು ಭಾಗದ ತಾಲೂಕುಗಳಲ್ಲಿ ಭಾರೀ ಮಳೆಯಾಗಿದ್ದರೆ, ಚಿಕ್ಕಮಗಳೂರು ಸೇರಿದಂತೆ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಮೋಡಕವಿದ ವಾತಾವರಣ ಹಾಗೂ ಆಗಾಗ್ಗೆ ಸಾಧಾರಣ ಮಳೆಯಾಗಿದೆ. ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್,ಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ಹಾಗೂ ಸಂಜೆ ಭಾರೀ ಮಳೆಯಾಗಿದೆ.

ಕಳಸ ತಾಲೂಕಿನಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರೀ ಮಳೆ ಹಾಗೂ ಗಾಳಿಯಿಂದಾಗಿ ತಾಲೂಕಿನ ಬಸ್ರಿಕಲ್ ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಕೆಲ ಗಂಟೆಗಳ ಕಾಲ ಕಳಸ-ಕುದರೆಮುಖ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. 

ಮರ ಬಿದ್ದ ಹಿನ್ನಲೆಯಲ್ಲಿ ಕಳಸ-ಕಾರ್ಕಳ ರಸ್ತೆ ಮೂರು ಗಂಟೆಗಳಿಗೂ ಹೆಚ್ಚು ಕಾಲ ಕಡಿತಗೊಂಡಿತ್ತು. ಕಿ.ಮೀ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪೊಲೀಸರು ಹಾಗೂ ಸ್ಥಳೀಯರು ಸೇರಿ ಮರವನ್ನು ತೆರವುಗೊಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News