×
Ad

ಕಡೂರು: ಮಾಜಿ ಸಚಿವ ಮಾಧುಸ್ವಾಮಿಯ ಕಾರು ಅಪಘಾತ

Update: 2024-04-22 11:40 IST

ಚಿಕ್ಕಮಗಳೂರು, ಎ.22: ಮಾಜಿ ಸಚಿವ ಮಾಧುಸ್ವಾಮಿ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಇಂದು ಬೆಳಗ್ಗೆ 9:40ರ ಸುಮಾರಿಗೆ ನಡೆದಿದೆ. ಆಟೋ ರಿಕ್ಷಾವೊಂದಕ್ಕೆ ಮಾಧುಸ್ವಾಮಿ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಮಾಧುಸ್ವಾಮಿ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬೀರೂರಿನಲ್ಲಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಾಧುಸ್ವಾಮಿಯವರ ಕಾರು, ಗುಜರಿ ಸಾಗಾಟದ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ರಿಕ್ಷಾ ಚಲಾಯಿಸುತ್ತಿದ್ದ ಬಾಣಾವರದ ರಫೀಕ್ ಎಂಬವರು ಗಾಯಗೊಂಡಿದ್ದು, ಅವರು ಕಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾಧುಸ್ವಾಮಿಯ ಕಾರಿನ ಮುಂಭಾಗಕ್ಕೆ ಸ್ವಲ್ವ ಹಾನಿಯಾಗಿದೆ. ಅಪಘಾತ ಸಂಭವಿಸಿ ಬಳಿಕ ಮಾಧುಸ್ವಾಮಿ ಅಲ್ಲಿಂದ ಬೇರೊಂದು ಕಾರಿನಲ್ಲಿ ತೆರಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News