Kalasa | ಕಾಡುಕೋಣ ದಾಳಿಗೆ ಮಹಿಳೆ ಬಲಿ
Update: 2026-07-07 16:43 IST
ಸಾಂದರ್ಭಿಕ ಚಿತ್ರ (AI)
ಚಿಕ್ಕಮಗಳೂರು : ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಬಳಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಶೀಲಾ (52) ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ನಡೆಸಿದೆ ಎನ್ನಲಾಗಿದೆ. ಮಹಿಳೆಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಬಲವಾಗಿ ತಿವಿದಿರುವ ಕಾರಣ ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಬರುವ ಮಾರ್ಗ ಮಧ್ಯೆಯೇ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.