Koppa | ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ

Update: 2026-07-21 19:38 IST

ಸಾಂದರ್ಭಿಕ ಚಿತ್ರ (AI)

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊಪ್ಪ ತಾಲೂಕಿನಲ್ಲಿ ಕಾಡುಕೋಣ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದ ಮಂಜುನಾಥ್ (45) ಕಾಡುಕೋಣ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿ. ಮನೆಯಿಂದ ತೋಟಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡುಕೋಣ ದಾಳಿ ಮಾಡಿದೆ. ಕಾಡುಕೋಣ ದಾಳಿಂದ ಮಂಜುನಾಥ್ ತೀವ್ರವಾಗಿ ಗಾಯ ಗೊಂಡಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಮಾರ್ಗಮದ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

15 ದಿನಗಳಲ್ಲಿ ಎರಡನೇ ಬಲಿ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ತೀವ್ರಗೊಂಡಿದ್ದು, ಜನರಲ್ಲಿ ಭೀತಿ ಹುಟ್ಟಿಸಿದೆ. ಜು.7ರಂದು ಕಳಸ ತಾಲೂಕಿನಲ್ಲಿ 52ವರ್ಷದ ಶೀಲಾ ಎಂಬುವರು ಕಾಡುಕೋಣ ದಾಳಿಗೆ ಬಲಿಯಾಗಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News