ಕೊಟ್ಟಿಗೆಹಾರ : ನಿಂತಿದ್ದ ಲಾರಿಗೆ ಕಾರು ಢಿಕ್ಕಿ; ಮೂವರು ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Update: 2026-08-08 07:30 IST

ಚಿಕ್ಕಮಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅಳಿಲುಘಟ್ಟ ಗ್ರಾಮದ ನಿವಾಸಿಗಳಾದ ಜ್ಞಾನೇಶ್ (21), ಮೋಹನ್ (35) ಹಾಗೂ ಗುರುಕಿರಣ್ (21) ಮೃತಪಟ್ಟವರು.

ಅಪಘಾತದಲ್ಲಿ ಪ್ರೇಮ್ ಕುಮಾರ್ (22) ಹಾಗೂ ಹೃತ್ವಿಕ್ (22) ಗಂಭೀರವಾಗಿ ಗಾಯಗೊಂಡಿದ್ದು, ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ತುಮಕೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ  ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಬಣಕಲ್ ಪೊಲೀಸರು ಪ್ರಕರಣ ದಾಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News