ಕೊಟ್ಟಿಗೆಹಾರ | ಹೃದಯಾಘಾತದಿಂದ ಬಾಲಕ ಮೃತ್ಯು
Update: 2025-08-10 23:28 IST
ಪ್ರೀತಮ್ (15)
ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ 15 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಪ್ರೀತಮ್ (15) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.
ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದ ಪ್ರೀತಮ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನಂತರ ಅವರನ್ನು ಚಿಕ್ಕಮಗಳೂರು ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಈ ಪ್ರಕರಣ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.