×
Ad

ಚಿಕ್ಕಮಗಳೂರು | ಮಹಿಳೆಗೆ ಕಿರುಕುಳ, ಜೀವ ಬೆದರಿಕೆ ಆರೋಪ: ಓರ್ವನ ಬಂಧನ

Update: 2025-10-29 23:15 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಮಹಿಳೆಯೊಬ್ಬರ ಫೊಟೊಗಳನ್ನು ಎಡಿಟ್ ಮಾಡಿ ಆಕೆಯ ಸ್ನೇಹಿತರಿಗೆ ಕಳುಹಿಸಿ ಮಹಿಳೆಗೆ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಓರ್ವನನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯ ಎಂಬಾತ ಫೋನ್ ಕಾಲ್‌ನಲ್ಲಿ ಪರಿಚಯವಾಗಿ ವಾಟ್ಸ್‌ಆ್ಯಪ್ ಕಾಲ್ ಮುಖಾಂತರ ನಿರಂತರವಾಗಿ ಮಹಿಳೆಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಚಿಕ್ಕಮಗಳೂರು ನಗರದ ಜಯನಗರದ ನಿವಾಸಿಯಾಗಿರುವ ಮಹಿಳೆಯೊಬ್ಬರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ವೈಯಕ್ತಿಕ ಫೊಟೊಗಳನ್ನು ಪಡೆದು ಎಡಿಟ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಾಗೂ ನನ್ನ ಸ್ನೇಹಿತರಿಗೆ ಕಳುಹಿಸಿ ಕಿರುಕುಳ ನೀಡಿದ್ದಲ್ಲದೇ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಆದಿತ್ಯನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News