×
Ad

ಕಡೂರು : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ವ್ಯಕ್ತಿ ಮೃತ್ಯು

Update: 2025-05-13 20:27 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು : ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಗೆದ್ದೆಹಳ್ಳಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಲೋಕೇಶಪ್ಪ(48) ಎಂದು ಗುರುತಿಸಲಾಗಿದ್ದು, ಮಂಗಳವಾರ ಸಂಜೆ ವೇಳೆ ಜಿಲ್ಲೆಯ ಬಯಲು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಈ ವೇಳೆ ಕಡೂರು ತಾಲೂಕಿನ ಗೆದ್ದೆಹಳ್ಳಿ ಗ್ರಾಮದ ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುತ್ತಿದ್ದಾಗ ಸಿಡಿಲು ಬಡಿದಿದೆ. ಸಿಡಿಲು ಬಡಿದ ರಭಸಕ್ಕೆ ಲೋಕೇಶಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News