ಮೂಡಿಗೆರೆ: ಬೈಕ್- ಕಾರು ಮುಖಾಮುಖಿ ಢಿಕ್ಕಿ; ಸವಾರ ಗಂಭೀರ
Update: 2025-02-18 12:06 IST
ಚಿಕ್ಕಮಗಳೂರು: ಬೈಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಫಲ್ಗುಣಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ.
ಮೆಗಲ್ ಪೇಟೆಯ ಸುಜೀತ್ ಎಂಬವನು ಗಾಯಗೊಂಡ ಬೈಕ್ ಸವಾರ. ಈತನ ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.