×
Ad

ಮೂಡಿಗೆರೆ | ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ : ಅತ್ಯಾಚಾರಗೈದು ಕೊಲೆ ಶಂಕೆ

Update: 2024-06-29 17:55 IST

ಮೂಡಿಗೆರೆ : ಸುಮಾರು 55 ವರ್ಷದ ಮಹಿಳೆಯೊಬ್ಬರು ಅರೆನಗ್ನ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.

ಮೃತ ಮಹಿಳೆಯನ್ನು ಬಿಳಗುಳ ಗ್ರಾಮದ ಕಲ್ಯಾಣಿ ಎಂದು ಗುರುತಿಸಲಾಗಿದೆ. ಮಹಿಳೆ ಪಟ್ಟಣದಲ್ಲಿ ಭಿಕ್ಷೆ ಬೇಡಿಕೊಂಡು ತಿರುಗಾಡುತ್ತಿದ್ದರು ಎನ್ನಲಾಗಿದ್ದು, ಶನಿವಾರ ಬೆಳಗ್ಗೆ ಪಟ್ಟಣದ ಜೂನಿಯರ್ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಕಾರ್‌ ಶೆಡ್ ಪಕ್ಕದಲ್ಲಿ ಬಟ್ಟೆಯಿಲ್ಲದೇ ಅರೆನಗ್ನ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಅಲ್ಲದೇ, ಮೈಮೇಲೆ ಗಾಯಗಳಾಗಿದ್ದು, ಪಕ್ಕದಲ್ಲಿಯೇ ರಕ್ತ ಹರಿದಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.

ದುಷ್ಕರ್ಮಿಗಳು ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಘಟನೆ ಸ್ಥಳಕ್ಕೆ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News