ಮೂಡಿಗೆರೆ : ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮೃತ್ಯು
Update: 2025-07-15 17:49 IST
ನಾಗೇಶ್ ಗೌಡ (72)
ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ಮಂಗಳವಾರ ನಡೆದಿದೆ
ಬೈರಾಪುರ ಗ್ರಾಮದ ಕೃಷಿಕ ನಾಗೇಶ್ ಗೌಡ (72) ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ರೈತರಾಗಿದ್ದಾರೆ. ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
11 ಕೆಂ.ವಿ. ವಿದ್ಯುತ್ ಪವರ್‍ಲೈನ್ ಕಂಬದ ಬಳಿ ವಿದ್ಯುತ್ ಗ್ರೌಂಡ್ ಆಗಿರುವುದೇ ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಗೋಣಿಬೀಡು ಪೊಲೀಸರು ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.