×
Ad

ಮೂಡಿಗೆರೆ: ಹಕ್ಕುಪತ್ರಕ್ಕಾಗಿ ಪಾದಯಾತ್ರೆ; ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಹೋರಾಟ

Update: 2025-03-05 14:15 IST

ಮೂಡಿಗೆರೆ : ನಿಡುವಾಳೆ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ಸಿಗುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಅವರು ಅನನ್ಯ ರೀತಿಯ ಹೋರಾಟಕ್ಕೆ ಕೈ ಹಾಕಿದ್ದಾರೆ. 20ಕ್ಕೂ ಹೆಚ್ಚು ನಿವೇಶನಗಳ ಮಣ್ಣನ್ನು ಸಂಗ್ರಹಿಸಿ, ನಿಡುವಾಳೆಯಿಂದ ಮೂಡಿಗೆರೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.

ಈ ಹೋರಾಟವು ಅಧಿಕಾರಿಗಳ ನಿರ್ಲಕ್ಷ್ಯವನ್ನು ತಲುಪಿಸುವ ಗಂಭೀರ ಯತ್ನವಾಗಿದೆ. ಹಲವಾರು ಬಾರಿ ತಹಶೀಲ್ದಾರ್ ಕಚೇರಿಗೆ ಹಕ್ಕುಪತ್ರಗಾಗಿ ಮನವಿ ಸಲ್ಲಿಸಿದರೂ ಸ್ಪಂದನೆ ಸಿಕ್ಕಿಲ್ಲ. ಇದರಿಂದ ಬೇಸರಗೊಂಡ ನವೀನ್ ಹಾವಳಿ ಅವರು ಅರೆಬೆತ್ತಲೆ ಪಾದಯಾತ್ರೆ ಆರಂಭಿಸಿದ್ದಾರೆ.

"ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇಬೇಕು. ಹತ್ತಾರು ವರ್ಷಗಳಿಂದ ಗ್ರಾಮಸ್ಥರು ತಲುಪಿಸುತ್ತಿರುವ ಮನವಿಗೆ ನಿರ್ಲಕ್ಷ್ಯ ತೋರಲಾಗಿದೆ. ನಮ್ಮ ಗ್ರಾಮಸ್ಥರಿಗೆ ನ್ಯಾಯ ದೊರಕುವವರೆಗೆ ಹೋರಾಟ ಮುಂದುವರಿಯುತ್ತದೆ" ಎಂದು ನವೀನ್ ಹಾವಳಿ ಹೇಳಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News