×
Ad

ಮೂಡಿಗೆರೆ ಪಪಂ ಆಡಳಿತ ಕಾಂಗ್ರೆಸ್ ತೆಕ್ಕೆಗೆ : ಅಧ್ಯಕ್ಷರಾಗಿ ಕೆ.ವೆಂಕಟೇಶ್ ಆಯ್ಕೆ

Update: 2025-03-01 22:54 IST

ಮೂಡಿಗೆರೆ : ಇಲ್ಲಿನ ಪಟ್ಟಣ ಪಂಚಾಯತ್‌ನಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಆಶಾಮೋಹನ್, ಕಾಂಗ್ರೆಸ್‌ನಿಂದ ಕೆ.ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಯಲ್ಲಿ ಬಿಜೆಪಿ 6, ಕಾಂಗ್ರೆಸ್ 7 ಮತ ಪಡೆಯುವ ಮೂಲಕ ಕಾಂಗ್ರೆಸ್ ಸದಸ್ಯ ಕೆ.ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ರಾಜಶೇಖರ್ ಮೂರ್ತಿ ಕರ್ತವ್ಯ ನಿರ್ವಹಿಸಿದರು.

ಈ ವೇಳೆ ಶಾಸಕಿ ನಯನಾ ಮೋಟಮ್ಮ, ಪಪಂ ಉಪಾಧ್ಯಕ್ಷ ರಮೇಶ್, ಸದಸ್ಯರಾದ ಗೀತಾ ರಂಜನ್ ಅಜಿತ್ ಕುಮಾರ್, ಹಂಝ, ಖುರ್ಷಿದ್‌ಬಾನು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಎಸ್.ಜಯರಾಮ್ ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News