ಮೂಡಿಗೆರೆ : ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ
Update: 2025-06-19 14:09 IST
ಚಿಕ್ಕಮಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿದ ಪರಿಣಾಮ ಸವಾರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ.
ಮತ್ತಿಕಟ್ಟೆ ನಿವಾಸಿ ಕುಮಾರ್ ಗಾಯಗೊಂಡ ವ್ಯಕ್ತಿ. ಬುಧವಾರ ಸಾಯಂಕಾಲ 7 ಗಂಟೆಯ ಹೊತ್ತಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣ ದಾಳಿ ನಡೆಸಿದ್ದು, ಗಾಯಗೊಂಡ ಕುಮಾರ್ ಬಣಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ. ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನ ಜನರು ಇದೀಗ ಕಾಡು ಕೋಣ ದಾಳಿಗೂ ಭಯಪಡುವಂತಾಗಿದೆ.