×
Ad

ಮುಳ್ಳಯ್ಯನಗಿರಿ ಭಾಗದಲ್ಲಿ ಕಾಡ್ಗಿಚ್ಚು; ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳ ಹರಸಾಹಸ

Update: 2025-02-17 20:58 IST

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು : ತಾಲೂಕಿನ ಹೆಸರಾಂತ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ಸಮೀಪದ ಅರಣ್ಯ ಪ್ರದೇಶದ ಬೆಟ್ಟದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ.

ಸೋಮವಾರ ಸಂಜೆ ವೇಳೆ ಕಿಡಿಗೇಡಿಗಳು ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತಗಳ ಸಾಲಿನ ಬೆಟ್ಟಕ್ಕೆ ಬೆಂಕಿ ಹಾಕಿದ್ದಾರೆಂದು ಹೇಳಲಾಗುತ್ತಿದೆ. ಮುಳ್ಳಯ್ಯನಗಿರಿ ಸಮೀಪದಲ್ಲಿ ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಸುದ್ದಿ ತಿಳಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದು, ಗಿರಿ ಭಾಗದಲ್ಲಿ ಭಾರೀ ಗಾಳಿ ಇರುವ ಕಾರಣ ಬೆಂಕಿಯ ತೀವ್ರತೆ ಹೆಚ್ಚುತ್ತಿರುವುದರಿಂದ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮುಳ್ಳಯ್ಯನಗಿರಿ ಭಾಗದಲ್ಲಿ ಅಪರೂಪದ ಶೋಲಾ ಕಾಡುಗಳು, ವನ್ಯಜೀವಿಗಳು ಬೆಂಕಿಗೆ ಆಹುತಿಯಾಗುತ್ತಿದ್ದು, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಾತ್ರಿಯೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರು ಸಿಬ್ಬಂದಿಯೊಂದಿಗೆ ಸೇರಿ ಬೆಂಕಿನಂದಿಸಲು ಶ್ರಮಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News