×
Ad

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು: ಸಿ.ಟಿ.ರವಿ

Update: 2023-12-17 19:28 IST

ಚಿಕ್ಕಮಗಳೂರು: ಕಾಂಗ್ರೆಸ್ ಶಾಸಕ ಅಬ್ಬಯ್ಯ ಅವರ ಮನೆಗೆ ಅಥವಾ ಕಾಂಗ್ರೆಸ್ ಕಚೇರಿಗೆ ಟಿಪ್ಪು ಸುಲ್ತಾನ್ ಹೆಸರಿಡಲಿ ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಾಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನೇ ಇಡಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಬೇಕೆಂದು ಪ್ರಸ್ತಾಪ ಮಾಡಿದ್ದಾರೆ. ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ಮಾಡಿರುವುದು ನಿಜ. ಅದೇ ರೀತಿ ಹಿಂದೂಗಳ ಮಾರಣಹೋಮ ಮಾಡಿದ್ದು ವಾಸ್ತವಿಕ ಸತ್ಯ, ಟಿಪ್ಪು ಮತ್ತು ಹೈದರಾಲಿ ಮೋಸದಿಂದ ಮೈಸೂರು ಅರಸರ ರಾಜಸ್ವತ್ತಿಗೆಯನ್ನು ಕಬಳಿಸಿರುವ ಹುನ್ನಾರವು ಸತ್ಯ ಎಂದರು.

ಮೈಸೂರು ಸಾಮ್ರಾಜ್ಯಕ್ಕೆ ಕೊಡುಗೆ ನೀಡಿದ್ದು ನಾಲ್ವಾಡಿ ಕೃಷ್ಣರಾಜ ಒಡೆಯರ್, ಕೆಆರ್‍ಎಸ್ ಅಣೆಕಟ್ಟೆ, ಮೈಸೂರು ಬ್ಯಾಂಕ್, ಮೈಸೂರು ಮೈ ಶುಗರ್ ಕಂಪನಿ, ಮೈಸೂರು ಪೇಪರ್ ಮಿಲ್, ಮೈಸೂರು ಸಿಲ್ಕ್ ಕಾರ್ಖಾನೆ ಸ್ಥಾಪನೆ, ಮೈಸೂರು ವಿ.ವಿ ನಿರ್ಮಾಣದ ಕೀರ್ತಿ ನಾಲ್ವಾಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News