×
Ad

ಚಿಕ್ಕಮಗಳೂರು: ಮಂಗನಕಾಯಿಲೆ ಸೋಂಕಿತ ಮಹಿಳೆ ಮೃತ್ಯು

Update: 2024-02-28 15:30 IST

ಚಿಕ್ಕಮಗಳೂರು, ಫೆ.28: ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆ.ಎಫ್.ಡಿ.) ಸೋಂಕಿಗೆ ಪಾಸಿಟಿವ್ ಆಗಿದ್ದ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕಾರ್ಮಿಕ ಮಹಿಳೆ ಕೊಟ್ರಮ್ಮ (43) ಮೃತಪಟ್ಟವರು.

ಕೊಪ್ಪ ತಾಲ್ಲೂಕಿನ ನುಗ್ಗಿ ಗ್ರಾಪಂ ವ್ಯಾಪ್ತಿಯ ದೇವಗನ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೊಟ್ರಮ್ಮ ಕೆಲ ದಿನಗಳ ಹಿಂದೆ ಜ್ವರ, ಸುಸ್ತು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಮಹಿಳೆಯ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಅದರ ವರದಿಯಲ್ಲಿ ಕೆ.ಎಫ್.ಡಿ. ಸೋಂಕು ತಗುಲಿರುವುದು ದೃಢಪಟ್ಟಿತ್ತೆನ್ನಲಾಗಿದೆ.

ಅರೋಗ್ಯ ಸಮಸ್ಯೆ ಉಲ್ಬಣಗೊಂಡ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊಟ್ರಮ್ಮ ಮೃತಪಟ್ಟಿದ್ದಾರೆ.

ಕೊಪ್ಪ ಹಾಗೂ ಎನ್.ಆರ್ ಪುರದಲ್ಲಿ ಮತ್ತೆ 6 ಮಂದಿಯಲ್ಲಿ ಮಂಗನಕಾಯಿಲೆ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News