×
Ad

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Update: 2025-07-26 17:38 IST

ಚಿಕ್ಕಮಗಳೂರು : ಡೆತ್ ನೋಟ್ ಬರೆದಿಟ್ಟು ಗುಪ್ತಚರ ಇಲಾಖೆಯ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಸಮೀಪದ ಕರ್ತಿಕೆರೆ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಗುಪ್ತಚರ ಇಲಾಖೆಯ ಪೇದೆ ಮಧು (28) ಎಂದು ಗುರುತಿಸಲಾಗಿದೆ.

ಮಧು ಕಳೆದೊಂದು ವರ್ಷದಿಂದ ಶಿವಮೊಗ್ಗದಲ್ಲಿ ಸೇವೆ‌ ಸಲ್ಲಿಸುತ್ತಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೇ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದರು.

ʼಅನಾರೋಗ್ಯದ ಸಮಸ್ಯೆʼ ಎಂದು ಡೆತ್ ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News