×
Ad

ರಾಮನಗರ ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

Update: 2026-02-02 19:01 IST

ಚಿಕ್ಕಮಗಳೂರು : ರಾಮನಗರ ಜಿಲ್ಲೆ ನಮ್ಮ ತಂದೆಯವರ ಕರ್ಮಭೂಮಿ, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರಿಗೆ ರಾಜಕೀಯ ಜನ್ಮ ನೀಡಿದ ಭೂಮಿ, ಹಾಗಾಗಿ ರಾಮನಗರ ಬಿಟ್ಟು ಹೋಗುವ ಅಥವಾ ಬೇರೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವ ಪ್ರಶ್ನೆಯೇ ಇಲ್ಲ ಎಂದು ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಆಲ್ದೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮನಗರದಲ್ಲಿ ನಮ್ಮನ್ನು ನಂಬಿಕೊಂಡಿರುವ ಕಾರ್ಯಕರ್ತರು ಮತ್ತು ಮುಖಂಡರು, ನಮ್ಮನ್ನು ಪ್ರೀತಿಸುವ ಜನರಿದ್ದಾರೆ. ಹಿಂದಿನ ನಾಲ್ಕು ಚುನಾವಣೆಗಳಲ್ಲಿ ಜಿಲ್ಲೆಯ ಜನ ನಮ್ಮನ್ನು ಕೈಬಿಟ್ಟಿಲ್ಲ. ಬೇರೆ ಬೇರೆ ಕಾರಣಕ್ಕೆ ಕೆಲವು ಸಂದರ್ಭಗಳಲ್ಲಿ ಏರುಪೇರು ಆಗಿದೆ. ದೇವೇಗೌಡರ ಕುಟುಂಬ ಜಿಲ್ಲೆಯ ಜನರಿಗಾಗಿ ದುಡಿದಿದೆ. ಸರ್ವಾಂಗೀಣಾ ಅಭಿವೃದ್ಧಿಗೆ ಶ್ರಮಿಸಿದೆ. ಹಾಗಾಗಿ ಆ ಜಿಲ್ಲೆಯನ್ನು ಬಿಟ್ಟು ಹೋಗುವ ಪ್ರಶ್ನೆಯೆ ಇಲ್ಲ ಎಂದರು.

ಪ್ರತಿಪಕ್ಷಗಳಿಗೆ ಇರುವ ಹಕ್ಕನ್ನು ಸದೆಬಡಿಯುವ ಪ್ರಯತ್ನ :

ದ್ವೇಷ ಭಾಷಣ ಕಾಯ್ದೆ ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳಿಗೆ ಇರುವ ಹಕ್ಕನ್ನು ಸದೆಬಡಿಯುವ ಪ್ರಯತ್ನವಾಗಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾದ ಮಸೂದೆಯಾಗಿದೆ. ರಾಜ್ಯಪಾಲರು ಎಲ್ಲಾ ಅಂಶಗಳನ್ನು ಗಮನಿಸಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದು, ಅವರ ತೀರ್ಮಾನವನ್ನು ಸ್ವಾಗತಿಸುತ್ತೇವೆ ಎಂದರು.

ರಾಜ್ಯಪಾಲರ ಘನತೆಯನ್ನು ತಗ್ಗಿಸುವ ಪ್ರಯತ್ನಗಳು ಸರಕಾರದ ಕಡೆಯಿಂದ ಆಗಬಾರದು, ಅವರನ್ನು ಮುಜುಗರಕ್ಕೆ ಸಿಲುಕಿಸುವುದು, ಅವರ ಗೌರವಕ್ಕೆ ಧಕ್ಕೆ ತರುವುದನ್ನು ಸರಕಾರ ಕೈಬಿಡಬೇಕು. ರಾಜ್ಯಪಾಲರು ಒಂದು ವಾಕ್ಯ ಓದಬೇಕೆ? ಒಂದು ಪ್ಯಾರ ಓದಬೇಕೆ? ಅಥವಾ ಒಂದು ಪದದಲ್ಲಿ ಮುಗಿಸಬೇಕೆ ? ಎನ್ನುವುದು ಅವರಿಗೆ ಬಿಟ್ಟಿರುವ ವಿಚಾರ. ಅವರು ಎಲ್ಲವನ್ನು ಓದಿಕೊಂಡಿದ್ದಾರೆ. ಮುಜುಗರಕ್ಕೆ ಈಡಾಗುವ ಅಂಶಗಳನ್ನು ಹಾಕಿದ್ದರು, ಅವುಗಳನ್ನು ನೋಡಿಕೊಂಡೆ ರಾಜ್ಯಪಾಲರು ಅವರ ಘನತೆಯನ್ನು ಕಾಪಾಡಿಕೊಂಡು ಆ ನಿಟ್ಟಿನಲ್ಲಿ ತೀರ್ಮಾನ ಕೈಗೊಂಡಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News