×
Ad

ಚಿಕ್ಕಮಗಳೂರು| ಕಲುಷಿತ ಆಹಾರ ಸೇವನೆ : ವಸತಿ ಶಾಲೆಯ 25 ಮಕ್ಕಳು ಅಸ್ವಸ್ಥ

Update: 2025-08-09 23:24 IST

ಸಾಂದರ್ಭಿಕ ಚಿತ್ರ (credit: Grok)

ಚಿಕ್ಕಮಗಳೂರು: ಕಲುಷಿತ ಆಹಾರ ಸೇವಿಸಿದ ಪರಿಣಾಮ 20ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಚಿಕ್ಕಮಗಳೂರು ನಗರದ ಪೊಲೀಸ್ ಬಡಾವಣೆಯಲ್ಲಿರುವ ಆಲ್ದೂರು ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ 25 ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಊಟ ಮಾಡಿದ ಬಳಿಕ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ಊಟದಲ್ಲಿ ಹುಳಗಳು ಪತ್ತೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News