×
Ad

ಕಾಡಾನೆ ಹಾವಳಿ, ಲಾಠಿಚಾರ್ಜ್ ಖಂಡಿಸಿ ಶೃಂಗೇರಿ ಬಂದ್

Update: 2026-02-23 13:33 IST

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ ಮತ್ತು ಇದನ್ನು ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೋಮವಾರ ಬೆಳಗ್ಗೆಯಿಂದ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ.

ಶೃಂಗೇರಿ, ಎನ್.ಆರ್. ಪುರ, ಕೊಪ್ಪ ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯಲ್ಲಿ ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬಂದ್ ಗೆ ಕರೆ ನೀಡಲಾಗಿದೆ.

ಈ ಹೋರಾಟಕ್ಕೆ ರೈತ ಸಂಘಟನೆಗಳು, ನಾಗರಿಕ ಹಿತರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕರು ಹಾಗೂ ಬಿಜೆಪಿ ಬೆಂಬಲ ಸೂಚಿಸಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಪಾರ-ವಹಿವಾಟುಗಳು ಸ್ಥಗಿತಗೊಂಡಿವೆ. ಸರಕಾರಿ, ಖಾಸಗಿ ಬಸ್ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News