×
Ad

ತರೀಕೆರೆ: ಕೆಎಸ್ಸಾರ್ಟಿಸಿ ಐರಾವತ ಬಸ್ ನಲ್ಲಿ ಏಕಾಏಕಿ ಬೆಂಕಿ: ಪ್ರಯಾಣಿಕರು ಪಾರು

Update: 2024-05-14 12:56 IST

ಚಿಕ್ಕಮಗಳೂರು, ಮೇ 14: ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಈ ವೇಳೆ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಶಿವಮೊಗ್ಗದಿಂದ ಮೈಸೂರಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಐರಾವತ ಬಸ್ಸಿನಲ್ಲಿ ಸಿಬ್ಬಂದಿ ಸೇರಿ ಒಟ್ಟು 40 ಮಂದಿ ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಮತ್ತು ಸಿಬ್ಬಂದಿ ತಕ್ಷಣ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News