×
Ad

ತರೀಕೆರೆ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Update: 2025-08-09 11:29 IST

ಚಿಕ್ಕಮಗಳೂರು: ತಿಂಗಳ ಹಿಂದೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಯುವಕನೋರ್ವನನ್ನು ರಸ್ತೆ ಮಧ್ಯೆಯೇ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಚರಣ್ (31) ಕೊಲೆಯಾದ ಯುವಕ.

ಈತ ವರ್ಷದ ಹಿಂದೆ ಪತ್ನಿಯನ್ನು ಕೊಲೆಗೈದ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದನು. ಕಳೆದ ತಿಂಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು.

ಕಳೆದ ರಾತ್ರಿ ಲಕ್ಕವಳ್ಳಿ ಎಂಬಲ್ಲಿ ದುಷ್ಕರ್ಮಿಗಳು ಈತನನ್ನು ರಸ್ತೆ ಮಧ್ಯೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News