×
Ad

ವಿಮೆನ್ ಇಂಡಿಯಾ ಮೂವ್ಮೆಂಟ್ ಚಿಕ್ಕಮಗಳೂರು ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

Update: 2025-11-09 19:39 IST


ಚಿಕ್ಕಮಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಚಿಕ್ಕಮಗಳೂರು ಜಿಲ್ಲಾ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಆಯಿಷ ಮೂಡಿಗೆರೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಪಾಧ್ಯಕ್ಷೆಯಾಗಿ ಆಶಾ ಸಂತೋಷ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಾಹೀನ್, ಕಾರ್ಯದರ್ಶಿಯಾಗಿ ವೀಣಾ ಮೂಡಿಗೆರೆ, ಕೋಶಾಧಿಕಾರಿಯಾಗಿ ನಝ್ರತ್, ಜಿಲ್ಲಾ ಸಮಿತಿ ಸದಸ್ಯರುಗಳಾಗಿ ತಸ್ಲೀಮಾ ಹಾಗೂ ತರನ್ನುಮ್ ರವರು ಆಯ್ಕೆಯಾಗಿದ್ದಾರೆ.

ಸಭೆಯನ್ನುದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, "ಪ್ರಸಕ್ತ ಸನ್ನಿವೇಶದಲ್ಲಿ ಮಹಿಳಾ ರಾಜಕೀಯದ ಪ್ರಾತಿನಿಧ್ಯದ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವುದು ಅನಿವಾರ್ಯವಾಗಿದೆ. ಏಕೆಂದರೆ ಮಹಿಳಾ ಮತದಾರರು ಅಧಿಕವಾಗುತ್ತಿದ್ದರೂ ಮಹಿಳೆಯರಲ್ಲಿ ರಾಜಕೀಯದಲ್ಲಿ ಪಾಲ್ಗೊಳ್ಳುವಿಕೆಯು ತೀರಾ ಕಡಿಮೆಯಾಗಿದೆ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಹಿಂಸಾಚಾರಗಳು ಕೊನೆಗೊಳ್ಳಬೇಕಾದರೆ, ಮಹಿಳೆಯರ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತುವಂತಹ ನಾಯಕಿಯರು ಚುನಾವಣಾ ರಾಜಕೀಯದಲ್ಲಿ ಪಾಲ್ಗೊಂಡು ಚುನಾಯಿತರಾಗಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು.

ಚಿಕ್ಕಮಗಳೂರು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಮುಸ್ತಫಾರವರು ಮಹಿಳಾ ರಾಜಕೀಯದ ಅನಿವಾರ್ಯತೆಯ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷೆ ಆಯಿಷಾರವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸಮಿತಿ ಸದಸ್ಯೆ ರಮ್ಲತ್ ರವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ವಿಮ್ ರಾಜ್ಯ ಸಮಿತಿ ಸದಸ್ಯೆ ರೂಬಿ ಹಾಸನ ರವರು ಸಮಾರೋಪ ಭಾಷಣಗೈದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಹಿನ್ ರವರು ಧನ್ಯವಾದಗೈದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News