×
Ad

ತರೀಕೆರೆ: ಜಲಪಾತದ ಬಳಿ ಸೆಲ್ಫಿ ತಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕ ಮೃತ್ಯು

Update: 2024-06-10 21:08 IST

ಚಿಕ್ಕಮಗಳೂರು: ಜಲಪಾತದ ಬಳಿ ಇದ್ದ ಅಪಾಯಕಾರಿ ಬಂಡೆಯೊಂದರ ಮೇಲೆ ಮೇಲೆ ನಿಂತು ಸೆಲ್ಫಿ ತಗೆದುಕೊಳ್ಳುವಾಗ ಹೈದರಾಬಾದ್ ಮೂಲದ ಯುವಕನೊಬ್ಬ ಕಾಲುಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ಬಳಿ ಸೋಮವಾರ ವರದಿಯಾಗಿದೆ.

ಮೃತ ಯುವಕನನ್ನು ಹೈದ್ರಾಬಾದ್ ಮೂಲದ ಶ್ರವಣ್(25) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತನೊಂದಿಗೆ ಹೈದ್ರಾಬಾದ್‍ನಿಂದ ಬೈಕ್‍ನಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರವಾಸಕ್ಕೆ ಬಂದಿದ್ದು, ಸೋಮವಾರ ಸ್ನೇಹಿತನೊಂದಿಗೆ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ಗೆ ತೆರಳಿದ್ದ. ಈ ವೇಳೆ ಫಾಲ್ಸ್ ಬಳಿ ಇದ್ದ ಅಪಾಯಕಾರಿ ಬಂಡೆಯೊಂದನ್ನು ಏರಿ ಸೆಲ್ಫಿ ತೆಗೆಯಲು ಮುಂದಾಗಿದ್ದ ಯುವಕ ಬಂಡೆ ಏರಿ ಸೆಲ್ಪಿ ತೆಗೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಯುವಕನ ತಲೆಗೆ ಬಂಡೆ ಕಲ್ಲು ಬಡಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News