×
Ad

ಚಿತ್ರದುರ್ಗ: ನಡು ರಸ್ತೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Update: 2024-10-29 13:39 IST

ಚಿತ್ರದುರ್ಗ: ನಗರದ ಅಂಬೇಡ್ಕರ್ ವೃತ್ತದಲ್ಲಿ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮಧ್ಯಾಹ್ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ಗೋಪಿನಾಥ್(57) ಎಂದು ಗುರುತಿಸಲಾಗಿದೆ. ಗಂಭೀರ ಸುಟ್ಟ ಗಾಯಗೊಂಡಿರುವ ಅವರನ್ನು ಸ್ಥಳದಲ್ಲಿದ್ದವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ.

ನಗರಠಾಣೆ ಮುಂಭಾಗದಲ್ಲಿರುವ ಅಂಬೇಡ್ಕರ್ ವೃತ್ತದ ಬಳಿ ಏಕಾಏಕಿ ಮೈಮೇಲೆ ಹಚ್ಚಿಕೊಂಡು ಗೋಪಿನಾಥ್ ಆತ್ಮಹತ್ಯೆಗೆ ಯತ್ನಿಸಿದರೆನ್ನಲಾಗಿದೆ. ಗೋಪಿನಾಥ್ ರಿಗೆ ಮಾನಸಿಕ ಸಮಸ್ಯೆ ಇರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News