Chitradurga | ಕಾರು-ಕ್ಯಾಂಟರ್ ಲಾರಿ ನಡುವೆ ಢಿಕ್ಕಿ; ನಾಲ್ವರು ಮೃತ್ಯು
Update: 2026-01-10 23:53 IST
ಚಿತ್ರದುರ್ಗ : ಕಾರು ಹಾಗೂ ಕ್ಯಾಂಟರ್ ಲಾರಿ ಮಧ್ಯೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಗ್ರಾಮದ ಬಳಿ ನಡೆದಿದೆ.
ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಮೃತರನ್ನು ವಿಶ್ವನಾಥ್(22), ನಂಜುಂಡಿ(23), ರಾಹುಲ್(23), ಯಶ್ವಂತ್ (22) ಎಂದು ಗುರುತಿಸಲಾಗಿದೆ. ಇವರೆಲ್ಲರು ಹುಳಿಯಾರಿನಿಂದ ಹಿರಿಯೂರಿಗೆ ಆಗಮಿಸುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಆನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಹಿರಿಯೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.