×
Ad

ಚಿತ್ರದುರ್ಗ: ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 3.5 ಕೋಟಿ ರೂ. ಮೌಲ್ಯದ 5 ಕೆ.ಜಿ. ಚಿನ್ನಾಭರಣ ವಶ

Update: 2024-03-28 11:24 IST

ಚಿತ್ರದುರ್ಗ, ಮಾ.28: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿರುವ ಪೊಲೀಸರು, ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದಲ್ಲಿ ಚೀಲ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮನೋಜ್ ಎಂಬವರನ್ನು ವಿಚಾರಿಸಿದ ಪೊಲೀಸರು, ಬ್ಯಾಗ್ ಪರಿಶೀಲಿಸಿದಾಗ ಐದು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಅವುಗಳ ಮೌಲ್ಯ 3.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನವನ್ನು ದಾವಣಗೆರೆಯಿಂದ ಹಿರಿಯೂರು ಚಿನ್ನದ ಅಂಗಡಿಗೆ ತರಲಾಗುತ್ತಿತ್ತು ಎನ್ನಲಾಗಿದೆ. 18 ಕ್ಯಾರೆಟ್ ಚಿನ್ನದ ದಾಖಲೆ ಹಾಜರುಪಡಿಸಲು ವಿಫಲರಾದ ಮನೋಜ್ ರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News