ಚಿತ್ರದುರ್ಗ | ಸಹಾಯಕ ಮತಗಟ್ಟೆ ಅಧಿಕಾರಿ ಮೃತ್ಯು

Update: 2024-04-26 17:55 GMT

ಚಿತ್ರದುರ್ಗ : ಚುನಾವಣಾ ಕರ್ತವ್ಯದಲ್ಲಿದ್ದ ಸಹಾಯಕ ಮತಗಟ್ಟೆ ಅಧಿಕಾರಿ ಯಶೋದಮ್ಮ (58) ಹೃದಯಾಘಾತದಿಂದ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳಗೊಲ್ಲರಹಟ್ಟಿಯಲ್ಲಿ ನಡೆದಿರುವುದು ವರದಿಯಾಗಿದೆ.

ಮುಂಜಾನೆ ಮತದಾನದ ಆರಂಭದ ವೇಳೆಯಲ್ಲಿ ಯಶೋದಮ್ಮಗೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿದೆ. ಸ್ಥಳಕ್ಕೆ ಆಗಮಿಸಿದ ಸೆಕ್ಟರ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲುಪುವ ವೇಳೆಗಾಗಲೇ ತೀವ್ರ ಹೃದಯಾಘಾತಕ್ಕೆ ತುತ್ತಾಗಿ ಯಶೋದಮ್ಮ ಮೃತಪಟ್ಟಿದ್ದಾರೆ ಎಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಬಿ.ಆನಂದ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News