×
Ad

POCSO case | ಮೊದಲ ಪ್ರಕರಣದಲ್ಲಿ ಮುರುಘಾಶ್ರೀ ಖುಲಾಸೆ

ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು

Update: 2025-11-26 15:31 IST

ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ(Chitradurga)ದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಮೊದಲ ಪೊಕ್ಸೊ ಪ್ರಕರಣ(POCSO case)ದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಚಿತ್ರದುರ್ಗ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೊಕ್ಸೊ ಪ್ರಕರಣದ ವಾದ-ಪ್ರತಿವಾದ ಮಂಗಳವಾರ ಪೂರ್ಣಗೊಂಡಿತ್ತು. ವಾದ ಆಲಿಸಿದ ನ್ಯಾಯಾಲಯ ತೀರ್ಪುನ್ನು ಬುಧವಾರ ಪ್ರಕಟಿಸುವುದಾಗಿ ಘೋಷಿಸಿತ್ತು. ಅದರಂತೆ ಇಂದು ತೀರ್ಪು ನೀಡಿದ್ದು, ಮುರುಘಾಶ್ರೀಯನ್ನು ಖುಲಾಸೆಗೊಳಿಸಿ ಆದೇಶಿಸಿದೆ.

ಚಿತ್ರದುರ್ಗ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆಗಸ್ಟ್ 26ರಂದು ದೂರು ದಾಖಲಿಸಿದ್ದರು. ಈ ಸಂಬಂಧ ಆರೋಪಿ ಮುರುಘಾಶ್ರೀ ಶರಣರನ್ನು 2022ರ ಸೆಪ್ಟಂಬರ್ 1ರಂದು ಪೊಲೀಸರು ಬಂಧಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

ಮುರುಘಾ ಶರಣರ ವಿರುದ್ಧ ಎರಡು ಮೊಕದ್ದಮೆಗಳು ದಾಖಲಾಗಿದ್ದು, ಮೊದಲ ಎಫ್ಐಆರ್ ನಲ್ಲಿ ಇಬ್ಬರು ಸಂತ್ರಸ್ತ ಮಕ್ಕಳು ಇದ್ದುದ್ದರಿಂದ ಎರಡು ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News