×
Ad

ರಸ್ತೆ ಅಪಘಾತ ಪ್ರಕರಣ: ಮಲಯಾಳಂ ನಟ ಶ್ರೀನಾಥ್ ಭಾಸಿ ಬಂಧನ

Update: 2024-10-15 12:49 IST

 ಶ್ರೀನಾಥ್ ಭಾಸಿ (Photo: instagam)

ತಿರುವನಂತಪುರಂ: ಕಾರು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಶ್ರೀನಾಥ್ ಭಾಸಿಯವರನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.

ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಅಪಘಾತದ ನಂತದ ನಟನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು ಎಂದು ಎರ್ನಾಕುಲಂ ಸೆಂಟ್ರಲ್ ಪೊಲೀಸರು ತಿಳಿಸಿದ್ದಾರೆ. ಬಂಧನದ ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಾಯಗಳಾಗಿತ್ತು.

ಭಾಸಿ ಅವರು ಸೋಮವಾರ ಪೊಲೀಸರ ಮುಂದೆ ಹಾಜರಾದಾಗ, ಅವರನ್ನು ಬಂಧಿಸಲಾಗಿದೆ. ಬಳಿಕ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News