×
Ad

ಭಾರತೀಯ ಶಸ್ತ್ರಚಿಕಿತ್ಸಕರ ಸಂಘದ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಎ.ಆರ್‌. ರಹಮಾನ್‌; ಕಾರಣ ಇಲ್ಲಿದೆ…

Update: 2023-10-04 12:17 IST

ಎ.ಆರ್‌. ರಹಮಾನ್‌ (PTI)

ಹೊಸದಿಲ್ಲಿ: ಭಾರತೀಯ ಶಸ್ತ್ರಚಿಕಿತ್ಸಕರ ಸಂಘವು ಖ್ಯಾತ ಸಂಗೀತಕಾರ ಎ.ಆರ್‌. ರಹಮಾನ್ ವಿರುದ್ಧ ದೂರು ದಾಖಲಿಸಿದ್ದು, ಎಆರ್ ರಹಮಾನ್ ಅವರು ಸಂಗೀತ ಕಾರ್ಯಕ್ರಮಕ್ಕಾಗಿ 29 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಮತ್ತು ಕಾರ್ಯಕ್ರಮವನ್ನು ಮಾಡಿಕೊಟ್ಟಿಲ್ಲ ಎಂದು ಆರೋಪಿಸಿದೆ.

ಎ.ಆರ್‌. ರಹಮಾನ್ ಪರ ವಕೀಲರು ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಎ.ಆರ್‌. ರಹಮಾನ್ ಪರ ವಕೀಲರು, ಮಾನಹಾನಿ ಮಾಡಲು ಯತ್ನಿಸಿದ್ದಕ್ಕೆ ಪರಿಹಾರವಾಗಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ ಎಂದು indiatoday.in ವರದಿ ಮಾಡಿದೆ.

ತನ್ನ ವಿರುದ್ಧದ ದೂರನ್ನು ಮೂರು ದಿನಗಳಲ್ಲಿ ಹಿಂಪಡೆಯುವಂತೆ ಭಾರತೀಯ ಶಸ್ತ್ರಚಿಕಿತ್ಸಕರ ಸಂಘಕ್ಕೆ ಕಾನೂನು ನೋಟಿಸ್ ಕಳುಹಿಸಿದ್ದಾರೆ. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಇದರಲ್ಲಿ ನಮಗೆ ಗೊತ್ತಿಲ್ಲದ ಮೂರನೇ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಎ.ಆರ್‌. ರಹಮಾನ್ ಅವರ ಪ್ರತಿಷ್ಠೆಗೆ ಧಕ್ಕೆ ತಂದಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸುವಂತೆ ನೋಟಿಸ್‌ನಲ್ಲಿ ಹೇಳಿದ್ದಾರೆ. ಅಲ್ಲದೆ, ಮಾನಹಾನಿ ಮಾಡಿದ್ದಕ್ಕಾಗಿ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ವಕೀಲರು ಒತ್ತಾಯಿಸಿದ್ದಾರೆ. ಸಂಘವು ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ ಕಾನೂನು ಮತ್ತು ಕ್ರಿಮಿನಲ್ ಕ್ರಮದ ಮೊರೆ ಹೋಗುವುದಾಗಿ ಅವರು ಎಚ್ಚರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News