×
Ad

ಬಿಗ್ ಬಾಸ್ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲು

Update: 2023-11-14 19:08 IST

ತನಿಷಾ ಕುಪ್ಪಂಡ

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಹಾಗೂ ನಟಿ ತನಿಷಾ ಕುಪ್ಪಂಡ ವಿರುದ್ಧ ಜಾತಿ ನಿಂದನೆ ಆರೋಪದಡಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ವಾಹಿನಿಯ 'ಬಿಗ್ ಬಾಸ್' ಶೋನಲ್ಲಿ ತನಿಷಾ ಕುಪ್ಪಂಡ ಅವರು ಬೋವಿ ಜನಾಂಗದ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ ಎಂಬುವರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ‌ ಕುಂಬಳಗೂಡು ಪೊಲೀಸರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ ಪದ್ಮಾ, 'ಬೋವಿ ಜನಾಂಗದ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ತನಿಷಾ ಕುಪ್ಪಂಡ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಮಾಡಲಾಗುವುದು' ಎಂದು  ಎಚ್ಚರಿಸಿದ್ದಾರೆ.

ಇತ್ತೀಚೆಗಷ್ಟೇ  ಕೊರಳಲ್ಲಿ ಧರಿಸಿದ ಚಿನ್ನದ ಸರದಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ನನ್ನು ಅರಣ್ಯಾಧಿಕಾರಿ ಮತ್ತು ಪೊಲೀಸರು ಬಂಧಿಸಿದ್ದ ಘಟನೆ ವರದೊಯಾಗಿತ್ತು. ಇದೀಗ ಮತ್ತೊಬ್ಬ ಸ್ಪರ್ಧಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News