×
Ad

ವಿಜಯ್ ಅವರ ʼಜನ ನಾಯಗನ್ʼ ಚಿತ್ರಕ್ಕೆ ಹಿನ್ನಡೆ : ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಸೂಚಿಸಿದ್ದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಡೆ

Update: 2026-01-27 12:14 IST

Photo credit: X/@actorvijay

ಹೊಸದಿಲ್ಲಿ: ವಿಜಯ್ ಅವರ ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ)ಗೆ ನಿರ್ದೇಶಿಸಿದ್ದ ಹಿಂದಿನ ಏಕಸದಸ್ಯ ಪೀಠದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಈ ಬಗ್ಗೆ ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿದೆ.

ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸಿಬಿಎಫ್‌ಸಿ (CBFC) ವಿಳಂಬಗೊಳಿಸಿ ಚಿತ್ರವನ್ನು ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಿದ ನಂತರ ವಿವಾದ ಉದ್ಭವಿಸಿತ್ತು. ಬಿಡುಗಡೆ ಸ್ಥಗಿತಗೊಂಡಿದ್ದರಿಂದ ಚಿತ್ರದ ನಿರ್ಮಾಪಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಮಾಣಪತ್ರ ನೀಡುವ ಪ್ರಕ್ರಿಯೆ ಹಾಗೂ ಆಕ್ಷೇಪಣೆಗಳನ್ನು ಸೂಕ್ತ ನ್ಯಾಯಸಮ್ಮತ ಪ್ರಕ್ರಿಯೆಯಂತೆ ಕೈಗೊಳ್ಳಲಾಗಿದೆಯೇ ಎಂಬುದನ್ನು ನಿರ್ಧರಿಸಲು ಹೈಕೋರ್ಟ್ ಇದೀಗ ಪ್ರಕರಣವನ್ನು ಮರುಪರಿಶೀಲಿಸಲಿದೆ.

ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಜಿ. ಅರುಳ್ ಮುರುಗನ್ ಅವರ ಪೀಠವು, ಹಿಂದಿನ ವಿಚಾರಣೆಯ ಸಮಯದಲ್ಲಿ ನೈಸರ್ಗಿಕ ನ್ಯಾಯ ತತ್ವಗಳನ್ನು ಪಾಲಿಸಲಾಗಿಲ್ಲ ಎಂದು ನಿರ್ಮಾಪಕರಿಗೆ ತಿಳಿಸಿದೆ.

ಈ ಪ್ರಕರಣದಲ್ಲಿ ಸೆನ್ಸಾರ್ ಮಂಡಳಿಗೆ ಪ್ರತಿಕ್ರಿಯಿಸಲು ಅವಕಾಶವನ್ನು ಒದಗಿಸುವಂತೆ ನ್ಯಾಯಾಲಯವು ಏಕ ಪೀಠಕ್ಕೆ ನಿರ್ದೇಶನ ನೀಡಿದೆ. ನಿರ್ಮಾಪಕರಾದ ಕೆವಿಎನ್ ಪ್ರೊಡಕ್ಷನ್ಸ್ ಅವರಿಗೆ ರಿಟ್ ಅರ್ಜಿಯನ್ನು ತಿದ್ದುಪಡಿ ಮಾಡುವಂತೆ ಸೂಚಿಸಿದೆ.

ನಟ ವಿಜಯ್ ರಾಜಕೀಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಿರುವ ಮಧ್ಯೆ ಜನ ನಾಯಗನ್ ಚಿತ್ರಕ್ಕೆ ಸಿಬಿಎಫ್‌ಸಿ ಪ್ರಮಾಣಪತ್ರ ನೀಡುವಲ್ಲಿ ವಿಳಂಬ ವಿವಾದಕ್ಕೆ ಕಾರಣವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News