ಕನ್ನಡದ ಖ್ಯಾತ ಕಿರುತೆರೆ ನಟಿ ಶೋಭಿತಾ ಆತ್ಮಹತ್ಯೆ
Update: 2024-12-01 19:01 IST
ನಟಿ ಶೋಭಿತಾ
ಬೆಂಗಳೂರು: ಕಿರುತೆರೆ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಎರಡು ವರ್ಷಗಳ ಹಿಂದೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ʼಬ್ರಹ್ಮಗಂಟುʼ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ್ದ ಶೋಭಿತಾ ನ.30 ತಡರಾತ್ರಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ʼಎರಡೊಂದ್ಲಾ ಮೂರುʼ, ಎಟಿಎಮ್ , ʼಒಂದ್ ಕಥೆ ಹೇಳ್ಲಾʼ ಹಲವು ಸಿನಿಮಾಗಳಲ್ಲಿ ನಟಿಸಿದ್ದರು.