×
Ad

ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

Update: 2025-05-27 12:07 IST

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್(47) ಸೋಮವಾರ ರಾತ್ರಿ ನಿಧನ ಹೊಂದಿದ್ದಾರೆ.

ಸುಮಾರು ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಆರ್ಥಿಕ ಸಂಕಷ್ಟಕ್ಕೂ ಸಿಲುಕಿದ್ದು, ಸಹಾಯಕ್ಕಾಗಿ ಮನವಿ ಮಾಡಿದ್ದರು. ಅನೇಕ ಸೆಲೆಬ್ರಿಟಿಗಳು ಶ್ರೀಧರ್ ಅವರಿಗೆ ಸಹಾಯ ಮಾಡುವಂತೆ ಕೋರಿಕೊಂಡಿದ್ದರು. ಅನಾರೋಗ್ಯಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕಿರುತೆರೆ ಹಾಗೂ ಸಿನೆಮಾ ರಂಗ ಎರಡರಲ್ಲೂ ಶ್ರೀಧರ್ ಸಕ್ರಿಯರಾಗಿದ್ದರು. ‘ಪಾರು’, ‘ವಧು’, ‘ಮಂಗಳ ಗೌರಿ’, ‘ಮನೆಯೇ ಮಂತ್ರಾಲಯ’ ಸೇರಿದಂತೆ 40ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರದಲ್ಲೂ ನಟಿಸಿದ್ದರು. ಅವರು ಕೆಲವು ತಮಿಳು ಸಿನೆಮಾಗಳನ್ನು ಕೂಡ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News