×
Ad

ʻಬಿಗ್ ಬಾಸ್’ ಪ್ರವೇಶಿಸಿದ ಶಾಸಕ ಪ್ರದೀಪ್ ಈಶ್ವರ್; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Update: 2023-10-09 21:17 IST

Screengrab: X/@ColorsKannada

ಬೆಂಗಳೂರು : ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಅವರು ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದಲ್ಲಿ ಸ್ಪರ್ಧಿಯಾಗಿದ್ದಾರೆ ಎನ್ನಲಾಗಿದೆ. ‘ಬಿಗ್ ಬಾಸ್’ ಮನೆಗೆ ಹೋಗಿರುವ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಶಾಸಕ ಪ್ರದೀಪ್ ಅವರು ಬಿಗ್ ಬಾಸ್ ಮನೆಗೆ ಪ್ರವೇಶಿಸಿದ್ದಾರೆ. ಕಲರ್ಸ್ ಕನ್ನಡದ ಟ್ವಿಟರ್ ಹ್ಯಾಂಡಲ್ ನಲ್ಲಿ ಈ ಕುರಿತ ಪ್ರೋಮೋ ಪೋಸ್ಟ್ ಆಗಿದೆ. ಪ್ರದೀಪ್ ಈಶ್ವರ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಈ ಕುರಿತು x ನಲ್ಲಿ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು, “ಏನ್ ಸಾರ್ ಇದು. ಜನಸೇವೆ ಮಾಡುವುದು ಬಿಟ್ಟು, ಬಿಗ್ ಬಾಸ್ ಬರೋದು ಕಾಮಿಡಿ ಕರ್ನಾಟಕ ಉದ್ದಾರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ಈಗ ಬರ ಇದೆ, ರೈತರು, ಜನರು ಸಮಸ್ಯೆಯಲ್ಲಿದ್ದಾರೆ, ಇಂತಹ ಸಮಯದಲ್ಲಿ ಚಿಕ್ಕಬಳ್ಳಾಪುರ ಶಾಸಕ ಆಗಿರುವ ಪ್ರದೀಪ್ ಈಶ್ವರ ತನ್ನ ಎಲ್ಲಾ ಕೆಲಸಗಳನ್ನು ಬಿಟ್ಟು ಬಿಗ್ ಬಾಸ್ ಮನೆಗೆ ಹೋಗುವುದು ಸರಿಯಲ್ಲ, ಶಾಸಕ Pradeep Eshwar ಬಿಗ್ ಬಾಸ್ ಮನೆಗೆ ಹೋಗುವುದನ್ನು ನಿಲ್ಲಿಸಬೇಕು” ಎಂದು ನೆಟ್ಟಿಗರೊಬ್ಬರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News