Toxic: ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಬಿಡುಗಡೆ
Photo Credit : x/@TheNameIsYash
ಕೆಜಿಎಫ್- ಚಾಪ್ಟರ್ 2 ಬಳಿಕ ಯಶ್ ನಟಿಸಿರುವ ಸಿನಿಮಾ ಬಿಡುಗಡೆಯಾಗಿರಲಿಲ್ಲ. ಆದ್ದರಿಂದ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗಿದೆ.
ಯುಗಾದಿಗೆ ಬಿಡುಗಡೆಯಾಗಲಿರುವ ಖ್ಯಾತ ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಹೊಸ ಲುಕ್ ಬಿಡುಗಡೆಯಾಗಿದೆ. ಮೊದಲೆರಡು ಲುಕ್ ನಲ್ಲಿ ಚಿತ್ರತಂಡ ‘ಯಶ್’ ಅವರಿರುವ ಪೋಸ್ಟರ್ ಬಿಡುಗಡೆ ಮಾಡಿದ್ದರು. ಇದೀಗ ಮೂರನೇ ಲುಕ್ ನಲ್ಲಿ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಗ್ಲಾಮರಸ್ ಗೆಟಪ್ ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.
‘KGF- ಚಾಪ್ಟರ್ 2’ ಬಳಿಕ ಯಶ್ ನಟಿಸಿರುವ ಸಿನಿಮಾ ಬಿಡುಗಡೆಯಾಗಿರಲಿಲ್ಲ. ಆದ್ದರಿಂದ ‘ಟಾಕ್ಸಿಕ್’ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿಯಾಗಿದೆ. ಕಿಯಾರಾ ಅಡ್ವಾಣಿ ಅವರು ಸಿನಿಮಾದಲ್ಲಿ ‘ನಾಡಿಯಾ’ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ ಯಶ್ ತಿಳಿಸಿದ್ದಾರೆ. ಸಿನಿಮಾ 2026 ಮಾರ್ಚ್ 19ರ ಯುಗಾದಿಯಂದು ಬಿಡುಗಡೆಯಾಗಲಿದೆ.
ಸರ್ಕಸ್ ಹಿನ್ನೆಲೆಯಲ್ಲಿ ಅವರ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಕಿಯಾರಾ ಮುಖದಲ್ಲಿ ಏನೋ ಆತಂಕ ಕಾಣಿಸುವಂತಿದೆ. ಆ ಮೂಲಕ ಇದು ಕೇವಲ ಗ್ಲಾಮರ್ ಪಾತ್ರವಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಈ ಚಿತ್ರದಲ್ಲಿ ಕಿಯಾರಾ ಅವರ ನಟನೆಗೆ ಹೆಚ್ಚು ಮಹತ್ವ ಸಿಗಲಿದೆ. ಇದು ಅವರ ವೃತ್ತಿಜೀವನದ ಅತ್ಯುತ್ತಮ ಪಾತ್ರ ಆಗಲಿದೆ ಎಂಬ ನಿರೀಕ್ಷೆ ಇದೆ.
ಗೀತು ಮೋಹನ್ ದಾಸ್ ಸಿನಿಮಾದ ನಿರ್ದೇಶಕರು. “ಕೆಲವು ಪಾತ್ರಗಳು ಸಿನಿಮಾಗೆ ಮಾತ್ರ ಸೀಮಿತ ಅಲ್ಲ. ಅವು ಕಲಾವಿದರಿಗೂ ಹೊಸ ಆಯಾಮ ನೀಡುತ್ತವೆ. ಈ ಪಾತ್ರಕ್ಕೆ ಕಿಯಾರಾ ಅಡ್ವಾಣಿ ಅವರು ನ್ಯಾಯ ಒದಗಿಸಿದ್ದಾರೆ. ಅದಕ್ಕಾಗಿ ನನಗೆ ಅವರ ಬಗ್ಗೆ ಹೆಮ್ಮೆ ಇದೆ” ಎಂದು ಅವರು ಹೇಳಿದ್ದಾರೆ.
ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಏಕಕಾಲಕ್ಕೆ ‘ಟಾಕ್ಸಿಕ್’ ಸಿನಿಮಾ ಸಿದ್ಧವಾಗುತ್ತಿದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಗಳಿಗೆ ಡಬ್ ಆಗುತ್ತಿದೆ.
ಹೊಸ ಟೀಸರ್ ಬಿಡುಗಡೆ ಯಾವಾಗ?
‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ಯಾವಾಗ ಬಿಡುಗಡೆಯಾಗುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಜನವರಿ 8ರಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಅಂದೇ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಟೀಸರ್ ರಿಲೀಸ್ ಆಗುವ ಸಾಧ್ಯತೆ ಇದೆ. ಯಶ್ ಅವರು ಟಾಕ್ಸಿಕ್ ನ ನಿರ್ಮಾಣಾ ನಂತರದ ಕೆಲಸಗಳಲ್ಲಿ ಬ್ಯುಸಿಯಾಗಿರುವ ಕಾರಣ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಸಂಭ್ರಮಾಚರಣೆ ಮಾಡುವುದಿಲ್ಲ ಎನ್ನಲಾಗುತ್ತಿದೆ. ‘ಟಾಕ್ಸಿಕ್’ ಚಿತ್ರದ ಕತೆ, ನಿರ್ಮಾಣದಲ್ಲಿ ‘ಯಶ್’ ಅವರ ಪಾತ್ರ ಹೆಚ್ಚಿದೆ.