ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ
Update: 2024-09-11 12:29 IST
Photo credit: freepressjournal.in
ಹೊಸದಿಲ್ಲಿ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಮುಂಜಾನೆ ಅನಿಲ್ ಅರೋರಾ ಅವರು ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲೈಕಾ ಅವರ ಬಾಂದ್ರಾ ನಿವಾಸಕ್ಕೆ ಹಲವು ಪೊಲೀಸರು ತೆರಳಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.