×
Ad

ಅತ್ಯಾಚಾರ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂಕೋರ್ಟ್ ಮೊರೆ ಹೋದ ಮಲಯಾಳಂ ನಟ ಸಿದ್ದೀಕ್

Update: 2024-09-26 15:30 IST

ನಟ ಸಿದ್ದೀಕ್ (PTI)

ಹೊಸದಿಲ್ಲಿ: ಯುವ ನಟಿಯೊಬ್ಬಳು ತಮ್ಮ ವಿರುದ್ಧ ಮಾಡಿದ್ದ ಆರೋಪವನ್ನು ಆಧರಿಸಿ ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬುಧವಾರ ಮಲಯಾಳಂ ನಟ ಸಿದ್ದೀಕ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು Live Law ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸಿದ್ದೀಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಗಳವಾರ ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. ಈ ಪ್ರಕರಣದಲ್ಲಿ ನಟ ಸಿದ್ದೀಕ್ ಭಾಗಿಯಾಗಿರುವುದು ಮೇಲ್ನೋಟದ ಸಾಕ್ಷಿಗಳಿಂದ ದೃಢಪಟ್ಟಿದೆ ಎಂದು ನ್ಯಾಯಾಲಯ ಹೇಳಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿದ್ದೀಕ್ ಅವರು ಸುಪ್ರೀಂ ಕೋರ್ಟ್ ನ ಮುಂದೆ ವಿಶೇಷ ರಜಾ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕೇರಳ ಸರಕಾರ ಮತ್ತು ದೂರುದಾರೆ ಕೇವಿಯಟ್ ಅರ್ಜಿಗಳನ್ನು ಸಲ್ಲಿಸಿದ್ದಾರೆ.

2016ರಲ್ಲಿ ಸಿದ್ದೀಕ್ ನನ್ನ ಮೇಲೆ ತಿರುವನಂತಪುರಂನ ಹೋಟೆಲ್ ಒಂದರಲ್ಲಿ ಅತ್ಯಾಚಾರವೆಸಗಿದ್ದರು ಎಂದು ಸಂತ್ರಸ್ತ ಮಹಿಳೆ ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News