ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಮದನ್ ಬಾಬ್ ನಿಧನ
Update: 2025-08-03 10:25 IST
Photo | NDTV
ಚೆನ್ನೈ : ತಮಿಳು ಚಿತ್ರರಂಗದ ಹಿರಿಯ ಹಾಸ್ಯ ನಟ ಮದನ್ ಬಾಬ್ ನಿಧನರಾಗಿದ್ದಾರೆ.
ಮದನ್ ಬಾಬ್(71) ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಶನಿವಾರ ಅನಾರೋಗ್ಯದಿಂದ ನಿಧನರಾದರು ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಮದನ್ ಬಾಬ್ 1984ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಅವರು ಕಮಲ್ ಹಾಸನ್, ರಜನಿಕಾಂತ್, ಅಜಿತ್, ಸೂರ್ಯ ಮತ್ತು ವಿಜಯ್ ಅವರಂತಹ ಪ್ರಮುಖ ನಟರೊಂದಿಗೆ ಪರದೆಯನ್ನು ಹಂಚಿಕೊಂಡಿದ್ದರು.
ಹಾಸ್ಯನಟ ಮದನ್ ಬಾಬ್ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅವರು ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕಾರ್ಯಕ್ರಮವೊಂದರಲ್ಲಿ ತೀರ್ಪುಗಾರರಾಗಿದ್ದರು. ಅವರು ಬಹುಮುಖ ಪ್ರತಿಭೆಯ ನಟ ಮತ್ತು ಸಂಗೀತಗಾರರಾಗಿದ್ದರು.