×
Ad

ʼಪದ್ಮಭೂಷಣ’ ಪುರಸ್ಕೃತ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ಆರೋಗ್ಯ ಸ್ಥಿತಿ ಗಂಭೀರ: ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ

Update: 2024-11-05 10:54 IST

ಗಾಯಕಿ ಶಾರದಾ ಸಿನ್ಹಾ (Photo: instagram/@an_shu_man)

ಹೊಸದಿಲ್ಲಿ: ʼಪದ್ಮಭೂಷಣ’ ಪ್ರಶಸ್ತಿ ಪುರಸ್ಕೃತ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಶಾರದಾ ಸಿನ್ಹಾ ಅವರ ಆರೋಗ್ಯದ ಬಗ್ಗೆ ಅವರ ಪುತ್ರ ಮಾಹಿತಿ ನೀಡಿದ್ದು, ತಾಯಿಯ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಾಯಿಗಾಗಿ ಪ್ರಾರ್ಥಿಸುವಂತೆ ಅಭಿಮಾನಿಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಶಾರದಾ ಸಿನ್ಹಾ(72) ಅವರು 2018ರಿಂದ ರಕ್ತದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾರದಾ ಸಿನ್ಹಾ ಅವರ ಕುಟುಂಬವನ್ನು ಸಂಪರ್ಕಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News