×
Ad

ಟಾಲಿವುಡ್ ನಟ ಫಿಶ್ ವೆಂಕಟ್ ನಿಧನ

Update: 2025-07-19 12:11 IST

ವೆಂಕಟೇಶ್ (Photo: X/@Movies4u_Officl)

ಹೈದರಾಬಾದ್: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಟಾಲಿವುಡ್ ನಟ ಫಿಶ್ ವೆಂಕಟ್ ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಚಿಕಿತ್ಸೆಗಾಗಿ ಹೈದರಾಬಾದ್ ನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಮಚಲಿಪಟ್ಣಂ ಮೂಲದ ವೆಂಕಟ್ ಅವರ ಮೂಲ ಹೆಸರು ಮಂಗಳಪಲ್ಲಿ ವೆಂಕಟೇಶ್. ಹೈದರಾಬಾದ್ ನಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದ ಅವರು, 2000ರಲ್ಲಿ ಚಲನಚಿತ್ರಗಳಲ್ಲಿ ನಟಿಸಲು ಪ್ರಾರಂಭಿಸಿದ್ದರು. ಖುಷಿ, ದಿಲ್, ಗಬ್ಬರ್ ಸಿಂಗ್ ಸೇರಿದಂತೆ ನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ನಟಿಸಿದ್ದರು. ಅವರು ಹೆಚ್ಚಾಗಿ ಹಾಸ್ಯ ನಟ, ಖಳನಾಯಕನ ಸಂಗಡಿಗನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು.

ಅನಾರೋಗ್ಯಕ್ಕೀಡಾಗಿದ್ದ ವೆಂಕಟ್, ಚಿತ್ರೋದ್ಯಮದಿಂದ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದರೂ, ಅವರಿಗೆ ನಿರೀಕ್ಷಿತ ನೆರವು ದೊರೆಯಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ನಟ ಫಿಶ್ ವೆಂಕಟ್ ತಮ್ಮ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News