×
Ad

ಕುಡುಪು ಗುಂಪು ಹತ್ಯೆಯಲ್ಲಿ ಮೃತಪಟ್ಟ ಅಶ್ರಫ್ ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿದ ಕಾಂಗ್ರೆಸ್ ನಿಯೋಗ; ಪರಿಹಾರ ವಿತರಣೆ

Update: 2025-07-07 15:47 IST

ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕೇರಳ ಸಂಸದ ಕೆ.ಸಿ.ವೇಣುಗೋಪಾಲ್ ಅವರ ಸೂಚನೆ ಮೇರೆಗೆ ಕುಡುಪು ಗುಂಪು ಹತ್ಯೆಯಲ್ಲಿ ಮೃತಪಟ್ಟ ಅಶ್ರಫ್ ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಿದ  ಕಾಂಗ್ರೆಸ್ ನಿಯೋಗ ಪರಿಹಾರ ಧನ ವಿತರಿಸಿತು. 

ಈ ವೇಳೆ ಅಶ್ರಫ್ ಕುಟುಂಬದೊಂದಿಗೆ ನಡೆದ ಚರ್ಚೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಸಲು ಸರಕಾರದ ವತಿಯಿಂದ ವಿಶೇಷ ಅಭಿಯೋಜಕರನ್ನು ನೇಮಿಸಲು ತೀರ್ಮಾನಿಸಲಾಯಿತು.

ಅದೇ ರೀತಿ ಹತ್ಯೆಯಾದ ಅಶ್ರಫ್ ರವರ ಕುಟುಂಬಕ್ಕೆ ಸರಕಾರದ ವತಿಯಿಂದ ಗುಂಪು ಹತ್ಯಾ ಕಾಯ್ದೆ ಪ್ರಕಾರ ಪರಿಹಾರ ಒದಗಿಸುವ ಕುರಿತಾಗಿ ಕೂಡಾ ಚರ್ಚೆ ನಡೆಸಲಾಯಿತು.

ಬಳಿಕ ಮಾನವೀಯತೆಯ ನೆಲೆಯಲ್ಲಿ ತಮ್ಮ ವೈಯುಕ್ತಿಕ ಖಾತೆಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ ಹತ್ತು ಲಕ್ಷ ಹಾಗೂ ಯು.ಟಿ.ಖಾದರ್ ಐದು ಲಕ್ಷ ರೂಪಾಯಿಯ ಪರಿಹಾರದ ಮೊತ್ತವನ್ನು ಅಶ್ರಫ್ ಕುಟುಂಬಸ್ಥರಿಗೆ ವಿತರಿಸಿದರು.

ನಿಯೋಗದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,  ಕಾಂಗ್ರೆಸ್ ಮುಖಂಡ ಜಿ ಎ ಬಾವ ಹಾಗೂ ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಅವರು ಇದ್ದರು.  

ಈ ಸಂದರ್ಭದಲ್ಲಿ ಅಶ್ರಫ್ ಕುಟುಂಬಸ್ಥರೊಂದಿಗೆ ಮಲಪ್ಪುರಂ ಕಾಂಗ್ರೆಸ್ ಮುಖಂಡರಾದ ನಾಸಿರ್ ವೇಂಙರ ಮುಂತಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News