×
Ad

ಸಂವಿಧಾನ ದಿನಾಚರಣೆ: ಸಂವಿಧಾನ 'ಪ್ರಸ್ತಾವನೆ'ಯ ಭಾಗ ಭೋದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2023-11-26 12:34 IST

ಬೆಂಗಳೂರು, ನ.26: ಸಂವಿಧಾನ ದಿನಾಚರಣೆಯ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಬೆಳಗ್ಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಕಾರ್ಯಕ್ರಮದ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಾರತದ ಸಂವಿಧಾನ 'ಪ್ರಸ್ತಾವನೆ'ಯ ಭಾಗವನ್ನು ಬೋಧಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

 

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News