×
Ad

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು

Update: 2023-08-21 12:08 IST

ಬೆಂಗಳೂರು, ಆ. 21: ‘ಆಪರೇಷನ್ ಹಸ್ತ’ದ ಚರ್ಚೆಯ ಬೆನ್ನಲ್ಲೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ನಗರದ ಸದಾಶಿವನಗರ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಲ ಕಾಲ ಮಾತುಕತೆ ನಡೆಸಿದ್ದಾರೆನ್ನಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಸಂಜೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ಬೆಜೆಪಿ ನಾಯಕನ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News