×
Ad

'ಧರ್ಮಸ್ಥಳ ಚಲೋ' ಸಮಾವೇಶಕ್ಕೆ ಪ್ರಹ್ಲಾದ್ ಜೋಷಿ ಚಾಲನೆ

Update: 2025-09-01 15:03 IST

ಬೆಳ್ತಂಗಡಿ; ಕಾಂಗ್ರೆಸ್ ಪಕ್ಷ‌ದೇಶದಲ್ಲಿ ಬಹುಸಂಖ್ಯಾತರ ವಿರುದ್ದ ನಿರಂತರ ಷಡ್ಯಂತರ ನಡೆಸುತ್ತಿದ್ದು ದರ್ಮಸ್ಥಳ‌ ಪ್ರಕರಣವೂಇದರ ಭಾಗವಾಗಿದೆ. ದರ್ಮಕ್ಷೇತ್ರದ ವಿರುದ್ದ ಷಡ್ಯಂತ್ರ ರೂಪಿಸುವವರನ್ನು ಹಿಂದೂ ಸಮಾಜ ತಿರಸ್ಕರಿಸಬೇಕಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ಅವರು ಸೋಮವಾರ ದರ್ಮಸ್ಥಳದಲ್ಲಿ ಬಿಜೆಪಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳ ಚಲೋ ಹಾಗೂ ಬೃಹತ್ ಸಮಾವೇಶದ ಉದ್ಗಾಟನೆಯನ್ನು ನೆರವೇರಿಸಿ ಮಾತನಾಡಿದರು.

ದಕ್ಷಿಣ ಕನ್ನಡದಲ್ಲಿ ಕಳೆದ ಮೂರು ದಶಕಗಳಿಂದ ಹಿಂದುತ್ವದ ನೆಲೆ ಭದ್ರವಾಗಿದೆ ಇಲ್ಲಿ ಏನೇ ಪ್ರಯತ್ನ ಮಾಡಿದರೂ ಅದನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ ಅದಕ್ಕಾಗಿ ಈಗ ಪುಣ್ಯ ಕ್ಷೇತ್ರಗಳ ವಿರುದ್ದ ದಾಳಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಒಮ್ಮೆ ಹೂತ ಮೃತದೇಹವನ್ನು ಹೊರತೆಗೆಯಬೇಕಾದರೆ ನ್ಯಾಯಾಧೀಶರ ಅನುಮತಿ ಪಡೆಯಬೇಕು. ಮುಸುಕಧಾರಿಯಾಗಿದ್ದ ಅನಾಮಿಕ ಕಾಂಗ್ರೆಸ್ ಪಕ್ಷದ ಸ್ನೇಹಿತ ಬುರುಡೆಯನ್ನು ತೆಗೆದುಕೊಂಡು ಬಂದಿದ್ದಾನೆ ಆತನ ವಿರುದ್ದ ಕ್ರಮ ಕೈಗೊಳ್ಳುವ ಬದಲು ಅಗೆಯುವ ಕಾರ್ಯ ನಡೆಸಿದರು ಅದರ ನೆಪದಲ್ಲಿ ಕ್ಷೇತ್ರದ ಅವಮಾನ ಮಾಡಿ ದರು ಎಂದು ಆರೋಪಿಸಿದರು. ದರ್ಗಾದಲ್ಲಿ ಅಥವಾ ಚರ್ಚ್ ಬಳಿ ಆದರೆ ಅವರು ಈ ರೀತಿ ಮಾಡುತ್ತಿದ್ದರೆ ಎಂದು ಸಚಿವರು ಪ್ರಶ್ನಿಸಿದರು.

ಬಿ.ಜೆ.ಪಿ.ಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ದೂರುದಾರನ ಪ್ರಾಥಮಿಕ ವಿಚಾರಣೆ ಹಾಗೂ ತನಿಖೆಯನ್ನೂ ಮಾಡದೆ, ಎಸ್.ಐ.ಟಿ. ರಚಿಸಿರುವುದು ಸರಿಯಾದ ಕ್ರಮವಲ್ಲ ಇದರ ಹಿಂದೆ ದೊಡ್ಡ ಸೌಜನ್ಯ ಹತ್ಯೆ ಪ್ರಕರಣ ಮರುತನಿಖೆ ನಡೆಸಿ ಆಕೆಯ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಬಿ.ಜೆ.ಪಿ. ಬೆಂಬಲ ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಚಾಮುಂಡಿ ಬೆಟ್ಟದ ಬಗ್ಯೆಯೂ ರಾಜಕೀಯ ಮಾಡಿರುವುದನ್ನು ಖಂಡಿಸಿದ ಅವರು ಕಾಂಗ್ರೆಸ್ ಸರ್ಕಾರ ಕಿತ್ತೊಸೆ ಯುವ ತನಕ ಹಿಂದೂಗಳು ಸಮ್ಮನೆ ಕೂರಲಾರರು ಎಂದು ಎಚ್ಚರಿಕೆ ನೀಡಿದರು.

ಧರ್ಮಸ್ಥಳದ ಬಗ್ಯೆ ಅಪಪ್ರಚಾರವನ್ನು ಖಂಡಿಸಿದ ಅವರು, ಕೋಟ್ಯಾಂತರ ಭಕ್ತರಿಗೆ ತೀವ್ರ ನೋವಾಗಿದೆ. ಹಿಂದೂಗಳ ತಾಳ್ಮೆಯ ಪರೀಕ್ಷೆ ಮಾಡಬೇಡಿ. ಧರ್ಮಸ್ಥಳ ಚಲೊ ಕಾರ್ಯಕ್ರಮವನ್ನು ಹಗುರವಾಗಿ ಪರಿಗಣಿಸಬೇಡಿ. ಪ್ರಕರಣವನ್ನು ಸಿ.ಬಿ.ಐ. ಅಥವಾ ಎನ್.ಐ.ಎ. ಮೂಲಕ ಇತ್ಯರ್ಥಗೊಳಿಸಬೇಕು. ಇಲ್ಲವಾದಲ್ಲಿ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ ಸಿದ್ದರಾಮಯ್ಯ ಸುತ್ತ ನಕ್ಸಲ್ ಗ್ಯಾಂಗ್ ಹಾಗೂ ನಗರ ನಕ್ಸಲರ ಕೈವಾಡವಿದೆ. ತಮಿಳು ನಾಡು, ದೆಹಲಿಯಲ್ಲಿಯೂ ಷಡ್ಯಂತ್ರ ನಡೆದಿದೆ. ಇದಕ್ಕೆ ವಿದೇಶ ದಿಂದಲೂ ಆರ್ಥಿಕ ನೆರವು ಲಭಿಸಿದೆ ಇದೆಲ್ಲ ತನಿಖೆ ಮಾಡಲು ಎಸ್.ಐ.ಟಿಗೆ ಸಾಧ್ಯವೇ ಎಂದು ಪ್ರಶ್ನಿಸಿದರು. ಎಸ್.ಐ.ಟಿ. ಕೇವಲ ಕೆರೆಯ ಮೀನುಗಳನ್ನು ಹಿಡಿದಿದೆ. ಸಮುದ್ರ ತಿಮಿಂಗಿಲಗಳನ್ನು ಹಿಡಿಯಬೇಕು. ಎಸ್.ಐ.ಎ. ಗೆ ಪ್ರಕರಣ ಹಸ್ತಾಂತರಿಸಿದರೆ ಮಾತ್ರ ನ್ಯಾಯ ಸಿಗಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತ್ಯಾತೀತ ಹೆಸರಿನಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ. ಅವರು ಧರ್ಮಸ್ಥಳದ ಭಕ್ತರ ಕ್ಷಮೆ ಕೇಳಬೇಕು. ನಾಡಿನ ಜನತೆಯ ಶಾಪದಿಂದ ರಾಜ್ಯ ಸರ್ಕಾರ ಸದ್ಯದಲ್ಲೆ ಪತನವಾಗುವುದು ಖಚಿತ ಎಂದು ಭವಿಷ್ಯ ನುಡಿದರು.

ಸಿ.ಟಿ. ರವಿ ಮಾತನಾಡಿ, ದೂರುದಾರನ ಹಿನ್ನೆಲೆ ತಿಳಿಯದೆ, ಮಂಪರುಪರೀಕ್ಷೆ ಮಾಡದೆ ಎಡಪಂಥೀಯರ ಮಾತುಕೇಳಿ ಎಸ್.ಐ.ಟಿಗೆ ಪ್ರಕರಣ ಒಪ್ಪಿಸಿರುವುದು ಸರಿಯಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಸುಧಾಕರ ರೆಡ್ಡಿ, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಶ್ರೀರಾಮುಲು ಕೂಡಾ ಎಸ್.ಐ.ಟಿ. ತನಿಖೆ ಹಾಗೂ ಅನಾಮಿಕನ ವರ್ತನೆಯನ್ನು ಖಂಡಿಸಿದರು. ಶಾಸಕರುಗಳಾದ ಸುನಿಲ್ ಕುಮಾರ್ ಕಾರ್ಕಳ, ದೊಡ್ಡಣ್ಣ ಗೌಡ ಪಾಟೀಲ್, ಮುನಿರತ್ನ, ಭಾರತಿ ಶೆಟ್ಟಿ, ರೇನುಕಾಚಾರ್ಯ, ಭಾಗೀರಥಿ ಮುರುಳ್ಯ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ತೇಜಸ್ವಿಸೂರ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಬಿ.ವೈ. ವಿಜಯೇಂದ್ರ ಧನ್ಯವಾದವಿತ್ತರು. ಬಿ.ಜೆ.ಪಿ. ದ.ಕ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News