×
Ad

ಬಂಟ್ವಾಳ| ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ತರಬೇತಿ ಕಾರ್ಯಾಗಾರ‌

Update: 2025-10-02 19:28 IST

ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀ ಜಯಂತಿ ಪ್ರಯುಕ್ತ ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ ಹಾಗೂ, ತರಬೇತಿ ಕಾರ್ಯಾಗಾರ‌ವು ಗುರುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದು, ಸಂಸ್ಥೆಯ ನೂತನ ಜಿಲ್ಲಾಧ್ಯಕ್ಷ ಅಶ್ಫಾಕ್ ಅಹ್ಮದ್ ವಿದ್ಯಾರ್ಥಿ ವೇತನ ವಿತರಿಸಿದರು.

ಬಂಟ್ವಾಳ ಎಸ್.ವಿ.ಎಸ್.ದೇವಳ ಪ.ಪೂ.ಕಾಲೇಜು ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ, ಸಂಸ್ಥೆಯ ಅಜೀವ ಸದಸ್ಯ ಬಿ.ಕೆ.ಅಬ್ದುಲ್ಲಾ ಕುಂಞಿ ಹಾಜಿ ಬೈರಿಕಟ್ಟೆ, ಮಂಗಳೂರು ಎ.ಜೆ.ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯರಾದ ಡಾ. ಹಸೀನಾ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯ ಜಿಲ್ಲಾ ಘಟಕದ ಪೂರ್ವಾಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಕೆ.ಕೆ.ಶಾಹುಲ್, ಜಿದ್ದಾ ಘಟಕದ ಪೂರ್ವಾಧ್ಯಕ್ಷ ಮೊಹಮ್ಮದ್ ಸಾಹೇಬ್ ಕಾರ್ಕಳ, ಬಂಟ್ವಾಳ ಘಟಕದ ಪೂರ್ವಾಧ್ಯಕ್ಷ ರಶೀದ್ ವಿಟ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ತಾಲೂಕು ಘಟಕದ ಪೂರ್ವಾದ್ಯಕ್ಷರಾದ ರಫೀಕ್ ಹಾಜಿ ಆಲಡ್ಕ, ನೋಟರಿ ಅಬೂಬಕ್ಕರ್ ವಿಟ್ಲ, ಪ್ರಮುಖರಾದ ವಿ.ಎಚ್.ಅಶ್ರಫ್ ವಿಟ್ಲ, ಕೆ.ಎಸ್.ಮೊಹಮ್ಮದ್, ಅರ್ಶದ್ ಸರವು, ಡಿ.ಪಿ.ಸಿದ್ದೀಕ್ ಹಾಜಿ, ಹಾಜಿ ಅಬ್ದುಲ್ ರಝಾಕ್ ಗೋಳ್ತಮಜಲು, ಮುಹಮ್ಮದ್ ನಾರಂಕೋಡಿ, ಟಿ.ಕೆ. ಮುಹಮ್ಮದ್ ಟೋಪ್ಕೋ, ಅಬೂಬಕ್ಕರ್ ಪುತ್ತು, ಇಬ್ರಾಹಿಂ ಮೊಯಿದಿನ್ ನಂದಾವರ, ಅಶ್ರಫ್ ಸಾಲೆತ್ತೂರು, ಮುಹಮ್ಮದ್ ಸಾಗರ್, ಡಿ.ಹಮೀದ್ ಕನ್ಯಾನ ಮೊದಲಾದವರು ಭಾಗವಹಿಸಿದ್ದರು.

ಉಪನ್ಯಾಸಕ ಹಾಗೂ ರಾಜ್ಯ ಮಟ್ಟದ ತರಬೇತುದಾರ ಅಬ್ದುಲ್ ರಝಾಕ್ ಅನಂತಾಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. 

ಇದೇ ವೇಳೆ ಕೈಯಲ್ಲಿ ಪೂರ್ತಿ ಕುರ್ ಆನ್ ಬರೆದು ಸಾಧನೆ ಮಾಡಿರುವ ವಿದ್ಯಾರ್ಥಿನಿಯರಾದ ಸಜ್ಲ ಇಸ್ಮಾಯಿಲ್ ಹಾಗೂ ಫಾತಿಮತ್ ಅಬೀರ ಇವರನ್ನು ಸನ್ಮಾನಿಸಲಾಯಿತು. ಜಮೀಯ್ಯತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಶ್ಫಾಕ್ ಅಹ್ಮದ್ ಕಾರ್ಕಳ, ಪತ್ರಿಕಾ ಕಾರ್ಯದರ್ಶಿಯಾಗಿ ಆಯ್ಕೆ ಯಾದ ಲತೀಫ್ ನೇರಳಕಟ್ಟೆ ಹಾಗೂ ಸ್ಕೌಟ್ಸ್ ನಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪುರಸ್ಕೃತರಾದ ಸಂಸ್ಥೆಯ ತಾಲೂಕು ಘಟಕದ ಪೂರ್ವಾದ್ಯಕ್ಷ ಬಿ.ಎಂ.ತುಂಬೆ ಅವರನ್ನು ಗೌರವಿಸಲಾಯಿತು. ಜಿಲ್ಲಾ ಮಟ್ಟದ ಸ್ಕೇಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಫಾತಿಮತ್ ಸೈದಾ ಅವರಿಗೆ ಪ್ರೋತ್ಸಾಹ ಧನ ನೀಡಿ ಅಭಿನಂದಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಹಕೀಂ ಕಲಾಯಿ ಸ್ವಾಗತಿಸಿದರು, ಪತ್ರಿಕಾ‌ ಕಾರ್ಯದರ್ಶಿ ಆಶಿಕ್ ಕುಕ್ಕಾಜೆ ಖಿರಾತ್ ಪಠಿಸಿದರು. ಪಿ.ಮೊಹಮ್ಮದ್ ಹಾಗೂ ಹಂಝ ಬಸ್ತಿಕೋಡಿ ಆನಿಯಾ ದರ್ಬಾರ್ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪಾಧ್ಯಕ್ಷ ಆಸಿಫ್ ಇಕ್ಬಾಲ್ ಕುಂಪನಮಜಲು ವಂದಿಸಿ, ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.











 




 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News